ಪಾಟ್ನಾ : NEET-UG ಪರೀಕ್ಷೆಯ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಬಿಹಾರದ ಪಾಟ್ನಾದಲ್ಲಿ ಮನೀಶ್ ಕುಮಾರ್ ಮತ್ತು ಅಶುತೋಷ್ ಕುಮಾರ್ ಎಂಬವರನ್ನು ಬಂಧಿಸಿದೆ, ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಸಿಬಿಐ ಬಂಧನಕ್ಕೂ ಮುನ್ನ ಬಿಹಾರ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಬಂಧಿತರು ಪರೀಕ್ಷೆಗೂ ಮುನ್ನ ಆಕಾಂಕ್ಷಿಗಳಿಗೆ ಪ್ರಶ್ನೆಪತ್ರಿಕೆಗಳು ಮತ್ತು ಉತ್ತರ ಕೀಗಳನ್ನು ನೀಡಿದ್ದರು ಎಂದು ಹೇಳಿದ ಆಕಾಂಕ್ಷಿಯೊಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.