ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಹಿಳೆಯರಿಗಾಗಿ PMMVY ಯೋಜನೆ ಆಯೋಜಿಸಿದೆ. ಈ ಯೋಜನೆಯು ದೇಶದ ಮಹಿಳೆಯರಿಗೆ ಪ್ರಯೋಜನವನ್ನ ಒದಗಿಸುತ್ತದೆ. ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಯಡಿ ಗರ್ಭಿಣಿಯರಿಗೆ ವಿವಿಧ ಕಂತುಗಳಲ್ಲಿ 11 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಯೋಜನೆಯು ಭಾರತದ ಎಲ್ಲಾ ರಾಜ್ಯಗಳಲ್ಲಿ ಅನ್ವಯಿಸುತ್ತದೆ. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಪ್ರಯೋಜನಗಳನ್ನು ಪಡೆಯಲು, ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರು ಅರ್ಜಿ ಸಲ್ಲಿಸಬಹುದು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ 2017 ರಲ್ಲಿ ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ಮೂರು ಕಂತುಗಳಲ್ಲಿ 11,000 ಆರ್ಥಿಕ ನೆರವು ನೀಡುತ್ತಿದೆ. ಮಹಿಳೆಯ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣವನ್ನು ಕಳುಹಿಸಲಾಗುತ್ತದೆ. ಇದರಿಂದ ಮಹಿಳೆಯರು ತಮ್ಮ ಮಕ್ಕಳನ್ನು ಸರಿಯಾಗಿ ಪೋಷಿಸಬಹುದು. ಹಣಕಾಸಿನ ನೆರವಿನ ಹೊರತಾಗಿ, ಎಲ್ಲಾ ಗರ್ಭಿಣಿಯರಿಗೆ ಉಚಿತ ಔಷಧಿಗಳು, ಪ್ರೆಗ್ನೆನ್ಸಿ ಪೂರ್ವ ಮತ್ತು ನಂತರದ ವೈದ್ಯಕೀಯ ತಪಾಸಣೆಯಂತಹ ಸೌಲಭ್ಯಗಳನ್ನು ಸಹ ಒದಗಿಸಲಾಗುತ್ತದೆ. ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು, ಮಹಿಳೆಯರು ಆನ್‌ಲೈನ್ ಮತ್ತು ಆಫ್‌ಲೈನ್ ಪ್ರಕ್ರಿಯೆಯ ಮೂಲಕ ಅರ್ಜಿ ಸಲ್ಲಿಸಬಹುದು. ಇದರ ಅಧಿಕೃತ ವೆಬ್‌ಸೈಟ್ https://pmmvy.wcd.gov.in ಆಗಿದೆ .