ಬೆಂಗಳೂರು : ಸೆಪ್ಟೆಂಬರ್ ೧೪ ರಂದು ಮತ್ತು ಸೆಪ್ಟೆಂಬರ್ ೧೫ರಂದು ಕರ್ನಾಟಕ ಲೋಕಸೇವಾ ಆಯೋಗವು ನಡೆಸಲು ಉದ್ದೇಶಿಸಿದ್ದ ಕನ್ನಡ ಭಾಷಾ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಸರಕಾರದ ಆದೇಶದಂತೆ ಹುದ್ದೆಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕಾಲಾವಾಕಾಶ ನೀಡಲಾಗುವುದು ಎಂದು ಕೆಪಿಎಸ್ಸಿ ತಿಳಿಸಿದೆ.
ಶುಕ್ರವಾರ ಆಯೋಗವು ಪ್ರಕಟನೆ ಹೊರಡಿಸಿದ್ದು, ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆ.14 ಮತ್ತು ಸೆ.15ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು.