ಬೆಂಗಳೂರು : 2024ನೆ ಸಾಲಿನ ಭೂ ಕಂದಾಯ(ಎರಡನೆ ತಿದ್ದುಪಡಿ) ವಿಧೇಯಕ ಸೇರಿದಂತೆ ಆರು ವಿಧೇಯಕಗಳನ್ನು ಮಂಡನೆ ಮಾಡಲಾಯಿತು.
2024ನೆ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು, ಹಿಂದುಳಿದ ವರ್ಗಗಳ(ನೇಮಕಾತಿ ಮುಂತಾದವುಗಳ ಮೀಸಲಾತಿ)(ತಿದ್ದುಪಡಿ) ವಿಧೇಯಕ, ಕರ್ನಾಟಕ ವೈದ್ಯಕೀಯ ನೋಂದಣಿ, ಕೆಲವು ಕಾನೂನು(ತಿದ್ದುಪಡಿ) ವಿಧೇಯಕ, ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪ್ರಾಚೀನ, ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳ , ಅವಶೇಷಗಳ ವಿಧೇಯಕ ಹಾಗೂ ಕರ್ನಾಟಕ ಸರಕಾರಿ ಉದ್ಯಾನವನಗಳ ವಿಧೇಯಕವನ್ನು ಮಂಡನೆ ಮಾಡಲಾಯಿತು.