ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ ಯೋಜನೆಯಡಿ ಲಿಂಗತ್ವ ಅಲ್ಪಂಸಂಖ್ಯಾತರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ಝೆಂಡರ್ಸ್ ಸರ್ಟಿಫಿಕೇಷನ್ ವತಿಯಿಂದ ಗುರುತಿನ ಚೀಟಿ ಮತ್ತು ಪ್ರಮಾಣಪತ್ರ ಹೊಂದಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಈ ಯೋಜನೆಯಡಿ ಮಾಸಿಕ 2ಸಾವಿರ ರೂ.ಗಳನ್ನು ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.