ಬೆಂಗಳೂರು : ಮುಖ್ಯಮಂತ್ರಿ ಎಂದರೆ ಅದು ಸಿದ್ದರಾಮಯ್ಯ ತನ್ನ ಹಾಗೂ ತನ್ನ ಕುಟುಂಬ ಸದಸ್ಯರ ವಿರುದ್ಧ ಕೇಳಿ ಬಂದಿರುವ ಆರೋಪದ ಕುರಿತು ತನಿಖೆ ಮಾಡಲು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿದ್ದಾರೆ.
ಮುಡಾ ವಿಚಾರವನ್ನು ನಿಲುವಳಿ ಸೂಚನೆಯಡಿ ಅವಕಾಶ ಕೋರಿ ವಿರೋಧ ಪಕ್ಷಗಳು ಪ್ರಸ್ತಾವನೆ ಸಲ್ಲಿಸಿದ್ದವು. ನಮ್ಮ ಹಾಗೂ ವಿಪಕ್ಷಗಳ ಆಗ್ರಹವನ್ನು ಕೇಳಿದ ಸ್ಪೀಕರ್, ನಿಯಮಾವಳಿಗಳ ಪ್ರಕಾರ ಆ ವಿಚಾರ ಚರ್ಚೆಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಆ ಪ್ರಸ್ತಾವನೆಯನ್ನು ತಿರಸ್ಕರಿಸಿದರು ಎಂದು ಹೇಳಿದರು.