ಬೆಂಗಳೂರು : ಈ ವರ್ಷದ SSLC ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ (625ಕ್ಕೆ 625 ಅಂಕ ) ರಾಜ್ಯಕ್ಕೆ ಫಸ್ಟ್ ಬಂದಿದ್ದಾರೆ.
ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಬಂದಿದ್ದಾರೆ. ಈ ಮೂಲಕ ಇಡೀ ನಾಡಿಗೆ ಕೀರ್ತಿ ತಂದಿದ್ದಾರೆ.
ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್ ಬಂದಿದ್ದಾರೆ. 625ಕ್ಕೆ 625 ಅಂಕ ಪಡೆಯುವ ಮೂಲಕ ಇಡೀ ನಾಡಿಗೆ ಕೀರ್ತಿ ತಂದಿದ್ದಾರೆ. ಅಂಕಿತಾ ಅವರ ಈ ಸಾಧನೆಗೆ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಅಲ್ಲದೇ ಅಂಕಿತಾಗೆ ಹಾಗೂ ಆಕೆ ಓದಿದ ಶಾಲೆಗೆ ಸಿಎಂ ಬಂಪರ್ ಗಿಫ್ಟ್ ಘೋಷಿಸಿದ್ದಾರೆ.