ವಯನಾಡ್ : ಕೇರಳದ ವಯನಾಡ್ ಜಿಲ್ಲೆಯ ವೈತಿರಿ ತಾಲೂಕಿನಲ್ಲಿ ಮಂಗಳವಾರ ನಸುಕಿನ ವೇಳೆ ಸಂಭವಿಸಿದ ಭೀಕರ ಭೂಕುಸಿತಗಳು 150 ಜನ ಸಾವನ್ನಪ್ಪಿದ್ದಾರೆ. ಹಲವಾರು ಕುಟುಂಬಗಳು ಕಲ್ಲುಮಣ್ಣಿನಡಿ ಸಿಕ್ಕಿ ನಾಪತ್ತೆಯಾಗಿವೆ.
130ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, ಇನ್ನೂ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.
ಸಂಭವಿಸಿದ ಭೂಕುಸಿತಗಳಲ್ಲಿ ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿವೆ, ಮುಂಡಕ್ಕೈ, ಚೂರ್ಲಮಾಲ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ನಷ್ಟವಾಗಿವೆ.
34 ಶವಗಳನ್ನು ಗುರುತಿಸಲಾಗಿದ್ದು, ಈ ಪೈಕಿ 18 ಶವಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಅಪರಿಚಿತ ಶವಗಳನ್ನು ಗುರುತಿಸಲು ಡಿಎನ್‌ಎ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.
ಪೊತ್ತುಕಲ್ ಗ್ರಾಮದ ಸಮೀಪ ನದಿಯ ದಂಡೆಗಳಲ್ಲಿ ಐದರ ಹರೆಯದ ಮಗು ಸೇರಿದಂತೆ ಮೂವರ ಶವಗಳು ಪತ್ತೆಯಾಗಿವೆ.
ಕೇರಳ ಸಶಸ್ತ್ರ ಪೋಲಿಸ್ ಪಡೆಯ ಎರಡು ಬೆಟಾಲಿಯನ್‌ಗಳು ಮತ್ತು ಮಲಬಾರ್ ಸ್ಪೆಷಲ್ ಪೋಲಿಸ್ ಪಡೆಯನ್ನು ಸ್ಥಳಕ್ಕೆ ರವಾನಿಸಲಾಗಿದೆ. ಆರೋಗ್ಯ ಇಲಾಖೆಯ ನಿಯಂತ್ರಣ ಕೊಠಡಿಯನ್ನು ಏರ್ಪಡಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ತಿಳಿಸಿದರು.