ಹೊಸದಿಲ್ಲಿ : ಕೋಲ್ಕತ್ತಾದ ಸರ್ಕಾರಿ ಆರ್.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ಅಸಮಾಧಾನ ವ್ಯಕ್ತ ಪಡಿಸಿದೆ. ಎಫ್‌ಐಅರ್ ದಾಖಲಿಸಲು ವಿಳಂಬ ಕುರಿತಂತೆಯೂ ಪಶ್ಚಿಮ ಬಂಗಾಳ ಪೊಲೀಸರನ್ನು ಪೀಠವು ಪ್ರಶ್ನಿಸಿದೆ.
ವಿಚಾರಣೆಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ನ ಪೀಠವು, ಪ್ರಕರಣವನ್ನು ಭಯಾನಕ ಘಟನೆ ಎಂದು, ವೈದ್ಯೆಯ ಹೆಸರು, ಫೋಟೋಗಳು ಮತ್ತು ವೀಡಿಯೊಗಳನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕುವಂತೆ ಆದೇಶಿಸಿದೆ.
ಆಸ್ಪತ್ರೆಯ ಆಡಳಿತ ಮಂಡಳಿಯಾ ಬೇಜವಾಬ್ದಾರಿಕೆ, ಕೃತ್ಯ ಬೆಳಗಿನ ಜಾವ ಬೆಳಕಿಗೆ ಬಂದಿದೆ. ಇದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಕಾಲೇಜಿನ ಪ್ರಾಂಶುಪಾಲರು ಪ್ರಯತ್ನಿಸಿದ್ದಾರೆ. ಮೆಡಿಕಲ್ ಕಾಲೇಜು ಪ್ರಾಂಶುಪಾಲರು ವಿಚಾರಣೆ ಎದುರಿಸುತ್ತಿರುವಾಗ ಅವರನ್ನು ಕೂಡಲೇ ಬೇರೆ ಕಾಲೇಜಿಗೆ ನೇಮಕ ಮಾಡಿದ್ದು ಹೇಗೆ?” ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠವು ಪ್ರಶ್ನಿಸಿದೆ.