ವಯನಾಡ್ : ಕೇರಳದ ವಯನಾಡಿನ ಮೆಪ್ಪಾಡಿಯಲ್ಲಿನ ಸಂತ ಜೋಸೆಫ್ ಹೈಸ್ಕೂಲ್ನಲ್ಲಿ ಗುಡ್ಡ ಕುಸಿತದಿಂದ ತೊಂದರೆಗೊಳಗಾಗಿರುವ 40 ಕನ್ನಡಿಗರಿಗೂ ಆಶ್ರಯ ನೀಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ತೊಂದರೆಗೊಳಗಾಗಿರುವ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಅವರಿಗೆ ಅಗತ್ಯ ನೆರವನ್ನು ಒದಗಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ