ಆನೇಕಲ್ : ಬೆಂಗಳೂರಿನ ಆನೇಕಲ್‌ನಲ್ಲಿ 6 ಮಂದಿಯಲ್ಲಿ ಝೀಕಾ ವೈರಸ್ ಕಾಣಿಸಿಕೊಂಡಿದೆ. ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಸೂಚನೆ ನೀಡಿದೆ. ಈ ಆರು ಮಂದಿ ಚಳಿ ಜ್ವರ ಮತ್ತು ಮೈಕೈ ನೋವಿನಿಂದ ಬಳಲುತ್ತಿದ್ದರು, ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಝೀಕಾ ವೈರಸ್ ಪತ್ತೆಯಾಗಿರುವುದರಿಂದ ಈ ವ್ಯಾಪ್ತಿಯ 3 ಕಿಮೀ ವ್ಯಾಪ್ತಿಯನ್ನು ಕಂಟೋನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.