ಬೆಂಗಳೂರು : ಇವಿಎಂಗಳ ಮೇಲೆ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ ಎಂದು ಡಿಕೆಶಿ, ಮಸ್ಕ್ ಅನುಮಾನವನ್ನು ಬೆಂಬಲಿಸಿದ್ದಾರೆ.
ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ (ಇವಿಎಂ) ಅನ್ನು ತಿರುಚಲು ಸಾಧ್ಯವೆಂದು ಹೇಳಿಕೆ ನೀಡಿದ ಎಲಾನ್ ಮಸ್ಕ್ ಅಭಿಪ್ರಾಯವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಇವಿಎಂ ಮಿಷನ್ ಮೇಲಿನ ಎಲಾನ್ ಮಸ್ಕ್ ಅನುಮಾನ ಬೆಂಬಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.