ಚೀನಾ: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಕನಿಷ್ಠ 90 ಜನರು ಸಾವನ್ನಪ್ಪಿದ್ದು, ಇಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟ ಸಂಭವಿಸಿದಾಗ 247 ಕಾರ್ಮಿಕರು ಕರ್ತವ್ಯದಲ್ಲಿದ್ದರು ಎಂದು ವರದಿಯಾಗಿದೆ. ಆದರೆ 90 ಕಾರ್ಮಿಕರು ಸಾವನ್ನಪ್ಪಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ 100ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಮತ್ತು ನೂರಾರು ರಕ್ಷಣಾ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ.
ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಿಂದ ಭೀಕರ ದುರಂತ ಸಂಭವಿಸಿದೆ. 2009 ರ ನಂತರದ ಅತ್ಯಂತ ಭೀಕರ ಗಣಿಗಾರಿಕೆ ದುರಂತವಾಗಿದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ.
ಚೀನಾ ಗಣಿ ದುರಂತಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.
