ಜೀರೋ: ಕೇರಳ ದಂಪತಿ (Kerala Couple) ಹಾಗೂ ಅವರ ಸ್ನೇಹಿತೆ ಅರುಣಾಚಲಪ್ರದೇಶದ ಹೋಟೆಲ್ ರೂಂನಲ್ಲಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಮೂವರು ವಾಮಾಚಾರಕ್ಕೆ ಬಲಿಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತವಾಗಿದೆ.
ಮೃತರನ್ನು ಕೊಟ್ಟಾಯಂ ಜಿಲ್ಲೆಯ ಆಯುರ್ವೇದ ವೈದ್ಯರಾದ ನವೀನ್ ಥಾಮಸ್ (35), ಅವರ ಪತ್ನಿ ದೇವಿ ಬಿ (35) ಎಂದು ಗುರುತಿಸಲಾಗಿದೆ. ಮೂರನೇ ವ್ಯಕ್ತಿಯನ್ನು ಶಾಲಾ ಶಿಕ್ಷಕಿ, ತಿರುವನಂತಪುರಂ ನಿವಾಸಿ ಆರ್ಯ ಬಿ ನಾಯರ್ (29) ಎಂದು ಗುರುತಿಸಲಾಗಿದೆ. ಮೂವರು ಅರುಣಾಚಲ ಪ್ರದೇಶದಲ್ಲಿನ ಜೀರೋ ನಗರದಲ್ಲಿರುವ ಹೋಟೆಲ್ ಒಂದರಲ್ಲಿ ಮಾರ್ಚ್ 28ರಿಂದ ಒಂದೇ ರೂಂನಲ್ಲಿ ವಾಸ್ತವ್ಯ ಹೂಡಿದ್ದಾರೆ
ಮಂಗಳವಾರ ಕೇರಳ ದಂಪತಿ ಹಾಗೂ ಅವರ ಸ್ನೇಹಿತೆ ಹೋಟೆಲ್ ರೂಂನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೂವರ ಕೈಗಳಲ್ಲಿ ನರ ಕಟ್ ಆಗಿದ್ದು, ಆತ್ಮಹತ್ಯೆಯಂತೆ ಕಂಡು ಬಂದಿದೆ. ರೂಂ ಬಾಗಿಲು ತೆರೆಯದೆ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಪರಿಶೀಲಿಸಿದ್ದಾರೆ. ಆಗ ಮೂವರು ಶವವಾಗಿ ರೂಂನಲ್ಲಿ ಪತ್ತೆಯಾಗಿದ್ದಾರೆ.
ಹೋಟೆಲ್ ಸಿಬ್ಬಂದಿ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ರೂಂನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಪೊಲೀಸರು ಹೇಳುವ ಪ್ರಕಾರ, ಮೂವರ ಕೈಯ ಮಣಿಕಟ್ಟು ಕಟ್ ಆಗಿದ್ದು, ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.