ಡಾರ್ಜಿಲಿಂಗ್ : ಸಿಕ್ಕಿಂ ಹಾಗೂ ಪಶ್ಚಿಮ ಬಂಗಾಳದ ಉತ್ತರ ಭಾಗದಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭೂಕುಸಿತ ಮತ್ತು ಪ್ರವಾಹದಿಂದಾಗಿ 17 ಜನರು ಸಾವನ್ನಪ್ಪಿದ್ದಾರೆ.
ಪ್ರಧಾನಿ ಮೋದಿಯವರು, “ಪ್ರವಾಹದ ಪರಿಸ್ಥಿತಿಯನ್ನು, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದ್ದು, 17 ಜನರ ಸಾವು ತೀವ್ರ ನೋವುಂಟುಮಾಡಿದೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದ ಅವರು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ” ಎಂದು ತಿಳಿಸಿದ್ದಾರೆ.