ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಮೋದಿ ಸರ್ಕಾರದಲ್ಲಿ ಕರ್ನಾಟಕದಿಂದ ನಾಲ್ವರು ಸಚಿವರು ಸೇರ್ಪಡೆಯಾದರು.
ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ವಿ. ಸೋಮಣ್ಣ ಅವರು ಈ ಬಾರಿ ಫೆದ್ದು ರಾಜ್ಯ ಖಾತೆ ಸಚಿವರಾಗಿದ್ದಾರೆ.
ಪ್ರಾದೇಶಿಕ ಪಕ್ಷವಾದ ಜೆಡಿಎಸ್ ನಿಂದ ಗೆದ್ದು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿ ಅವರು ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಧಾರವಾಡ ಲೋಕಸಭಾ ಕ್ಷೇತ್ರದಿಂದ ಐದನೇ ಬಾರಿ ಗೆಲ್ಲುವು ಸಾಧಿಸಿದ ಪ್ರಹ್ಲಾದ್ ಜೋಶಿ ಅವರು ಕೇಂದ್ರ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಪ್ರಮಾಣವಚನ ಮಾಡಿದರು.
ಶೋಭಾ ಕರಂದ್ಲಾಜೆ ಅವರು ಮೋದಿ ಅವರ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು