ಬೆಂಗಳೂರು : ರಾಜ್ಯದ ಹೆದ್ದಾರಿಗಳಲ್ಲಿನ ಚೆಕ್ ಪೋಸ್ಟ್ಗಳಲ್ಲಿ ವಾಹನಗಳ ಸವಾರರಿಂದ ಹಣ ವಸೂಲಿ ಆರೋಪದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೀದರ್ನ ಮೊಳಕೇರಾ ಬಳಿ ಇರುವ ಆರ್ಟಿಒ ಚೆಕ್ ಪೋಸ್ಟ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶ ಪಡಿಸಿದ್ದಾರೆ.
ಬಳ್ಳಾರಿ ತಾಲೂಕಿನ ಪಿ.ಡಿ.ಹಳ್ಳಿ ಆರ್ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆಸಿ ಲಕ್ಷಾಂತರ ರೂ. ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ