ಅಯೋಧ್ಯೆಯಲ್ಲಿರಾಮ ಮಂದಿರದ ಉದ್ಘಾಟನೆ ನಡೆಯಲಿದೆ. ಅಂದು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹಲವು ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ. ಅನೇಕ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಸಿನಿಮಾ ನಟ-ನಟಿಯರ ಹೆಸರುಗಳು ಆಹ್ವಾನಿತರ ಪಟ್ಟಿಯಲ್ಲಿ ಇವೆ.
ಭಾರತೀಯ ಚಿತ್ರರಂಗದ ಕೆಲವು ಪ್ರಮುಖ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಿಲ್ಲ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಸಲ್ಮಾನ್ ಖಾನ್, ಆಮಿರ್ ಖಾನ್, ಶಾರುಖ್ ಖಾನ್ ಮುಂತಾದ ನಟರನ್ನು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಸುದ್ದಿಯಾಗಿದೆ. ಆಹ್ವಾನಿತರ ಪಟ್ಟಿಯಲ್ಲಿ ಈ ಸೆಲೆಬ್ರಿಟಿಗಳ ಹೆಸರು ಕಾಣಿಸಿಲ್ಲ.