ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal challengers Bangalore) ಮಹಿಳಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯಗಳನ್ನು ತಿಳಿಸಿದ್ದಾರೆ.
ಇಂದಿನ TATA WPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ ಎಂದು ತಮ್ಮ ಸಂತಸವನ್ನು ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ. ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು ಎಂದು ಬರೆದುಕೊಂಡಿದ್ದಾರೆ.