ಬೆಂಗಳೂರು : ಲಂಚ ಸ್ವೀಕರಿಸುವಾಗ ಕೆಆರ್ ಪುರಂ(KR Puram) ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ(Lokayukta) ಬಲೆಗೆ ಬಿದಿದ್ದಾರೆ. ಇನ್ಸ್ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್ಪೆಕ್ಟರ್ ರಮ್ಯ, ವಂಚನೆ ಪ್ರಕರಣದಲ್ಲಿ ಆರೋಪಿಯೊಬ್ಬನನ್ನ ವಶಕ್ಕೆ ಪಡೆದಿದ್ದರು. ಈ ಹಿನ್ನಲೆ ವಶದಿಂದ ಬಿಡಲು ಐದು ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದರು. ಜೊತೆಗೆ ಐವತ್ತು ಸಾವಿರ ಹಣವನ್ನ ಮೊದಲೇ ಪಡೆದಿದ್ದರು. ಮಾ.14 ರಂದು ಒಂದು ಲಕ್ಷ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ.
ಮಾ.12 ರಂದು ಜಿ.ಎಸ್.ಟಿ ಹಣ ಕಡಿತಗೊಳಿಸಲು ತುಮಕೂರಿನ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮಂಜುನಾಥ್ ವಿ.ಕೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ 40 ಸಾವಿರ ಹಣ ತೆಗೆದುಕೊಳ್ಳುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಇವರು ಮಂಜುನಾಥ್ ರೆಡ್ಡಿ ಎಂಬುವವರು ತಮ್ಮ ಬಳಿ 50 ಸಾವಿರ ಲಂಚಕ್ಕೆ ಹಣಕ್ಕೆ ಬೇಡಿಕೆಯಿಟ್ಟಿದ್ದ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇವರ ದೂರಿನ ಮೇಲೆ ಲೋಕಾಯುಕ್ತ ಡಿವೈಎಸ್ ಪಿ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಯನ್ನು ಅರೆಸ್ಟ್ ಮಾಡಿದ್ದರು.