ದೆಹಲಿಯಿಂದ ಲೇಹ್ಗೆ ಹೊರಟಿದ್ದ ಸ್ಪೈಸ್ ಜೆಟ್ಟ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತುರ್ತು ಭೂಸ್ಪರ್ಶ ಮಾಡಲಾಯಿತು. ಟೇಕ್ ಆಫ್ ಆಗಿ ಅರ್ಧ ಗಂಟೆಗಳಲ್ಲೇ ಮತ್ತೆ ವಿಮಾನಗಳು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು.
ಮೇ 19 ರಂದು, 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯೊಂದಿಗೆ ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಬಲ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು.
ಎರಡು ದಿನಗಳ ಹಿಂದೆ, ಮೇ 17 ರಂದು, 175 ಪ್ರಯಾಣಿಕರೊಂದಿಗೆ ದೆಹಲಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನವು ಅದರ ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಹಿಂತಿರುಗಿ ರಾಷ್ಟ್ರ ರಾಜಧಾನಿಯಲ್ಲಿ ಇಳಿಯಿತು. ಮೇ 1 ರಂದು, ಭುವನೇಶ್ವರದಿಂದ ನವದೆಹಲಿಗೆ ಹೊರಟಿದ್ದ ವಿಸ್ತಾರ ವಿಮಾನವು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಹಿಂತಿರುಗಿತು ಮತ್ತು ವಿಮಾನವು ಆಲಿಕಲ್ಲು ಮಳೆಗೆ ಸಿಲುಕಿ ಹಾನಿಗೊಳಗಾದ ನಂತರ ತುರ್ತು ಭೂಸ್ಪರ್ಶ ಮಾಡಿತು.